ಉಪ್ಪಿನಂಗಡಿ: ಕಂದಕಕ್ಕೆ ಉರುಳಿದ ಗ್ಯಾಸ್ ಸಿಲಿಂಡರ್‌ ಟ್ಯಾಂಕರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಘಟನೆ ಭಾನುವಾರ ಸಂಭವಿಸಿದೆ.
ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.