ಮಂಗಳೂರು: ಮಾರುತಿ ಸ್ವಿಫ್ಟ್ ಹಾಗೂ ಮಹೀಂದ್ರಾ ಕೆಯುವಿ100 ಕಾರುಗಳ ಮಧ್ಯೆ ಢಿಕ್ಕಿ ಸಂಭವಿಸಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್ ನಲ್ಲಿ ಗುರುವಾರ ನಡೆದಿದೆ.
ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ ಹಾಗೂ ಅವರ ಪತ್ನಿ ಪೂರ್ಣ ಗೋಖಲೆ ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಉಡುಪಿ ಜಿಲ್ಲೆಯ ಬೆಳ್ಮಣ್ ಮೂಲದವರಿದ್ದ ಮಹೀಂದ್ರಾ ಕೆಯುವಿ ನಡುವೆ ಬಲ್ಯ ಜಂಕ್ಷನ್ ನ ನೆಲ್ಯಾಡಿ ಕ್ರಾಸ್ ಬಳಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಎರಡೂ ಕಾರುಗಳು ಚರಂಡಿಗೆ ಬಿದ್ದಿವೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಲಂಕಾರಿನ 108 ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.