ಬೈಂದೂರು: ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ 2019-2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ 6ನೇ ಬಾರಿಗೆ ಶೇ. 100 ಫಲಿತಾಂಶ ದಾಖಲಿಸಿದೆ.
ಐದು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಮಾರಿ ಪ್ರಗತಿ 609 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ, ಕೃಷ್ಣರಾಜ್ ದೊಂಬೆ 598 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ರಿತೇಶ್ 559 ಅಂಕ ಗಳಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ರಾಜಶೇಖರ್ ಹೆಬ್ಬಾರ್, ಆಡಳಿತ ಮಂಡಳಿಯ ಕಾರ್ಯದರ್ಶಿ, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಈ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.