ಉತ್ತರಪ್ರದೇಶ: ಮತ್ತೊಂದು ಯುವತಿ ಅತ್ಯಾಚಾರಕ್ಕೆ ಬಲಿ

ಬಲರಾಂಪುರ: ಹತ್ರಾಸ್ ಅತ್ಯಾಚಾರ ಪ್ರಕರಣದ ಬೆನ್ನಲೇ ಇದೀಗ ಉತ್ತರಪ್ರದೇಶದ ಬಲರಾಂಪುರದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದ್ದು, 22 ವರ್ಷದ ಯುವತಿ ಅತ್ಯಾಚಾರಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾಳೆ.

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿ ಮಂಗಳವಾರ  ಮನೆಗೆ ಮರಳುವಾಗ ಇಬ್ಬರು ಪುರುಷರು ದಲಿತ ಜನಾಂಗಕ್ಕೆ ಸೇರಿದ ಯುವತಿಯ ಮೇಲೆ ಎರಗಿದ್ದು ಗಂಭೀರ ಸ್ಥಿತಿಯಲ್ಲಿ ಈಕೆ ಮನೆ ಸೇರಿದ್ದಳು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್‌ ವರಿಷ್ಠಾಧಿಕಾರಿ ದೇವ್‌ ರಂಜನ್‌ ವರ್ಮ ಹೇಳಿದ್ದಾರೆ.

ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯವರು ಪೊಲೀಸರಿಗೆ ವಿಷಯ ವರದಿ ಮಾಡಿದಾಗ ಯುವತಿಯ ಕುಟುಂಬದವರು ಆಕೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂದು ತಿಳಿಸಿದರು.

ಆರೋಪಿಗಳಾದ ಶಾಹಿದ್‌ ಮತ್ತು ಸಾಹಿಲ್‌ ಎಂಬುವರನ್ನು ಬಂಧಿಸಲಾಗಿದೆ ಎಂದು ವರ್ಮ ಹೇಳಿದ್ದಾರೆ.