ಉತ್ತರಾಖಂಡ:ಅಲಕನಂದಾ ನದಿಗೆ ಬಸ್ ಬಿದ್ದು ಓರ್ವ ಮೃತ್ಯು, 10 ಮಂದಿ ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಬಸ್‌ವೊಂದು ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದ ಪರಿಣಾಮ ಕನಿಷ್ಠ ಓರ್ವ ಮೃತಪಟ್ಟಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ.

ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ ಪ್ರದೇಶದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಈಗಾಗಲೇ 7 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನಲ್ಲಿ 18 ಮಂದಿ ಪ್ರಯಾಣಿಕರಿದ್ದರು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.