ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಇದೀಗ ಮೊದಲ ಬಾರಿಗೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿರುವ ವಿ. ಸುನಿಲ್ ಕುಮಾರ್ ಅವರು ಪ್ರಬಲವಾದ ಇಂಧನ ಖಾತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಜತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಆಗಸ್ಟ್ 4ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಖಾತೆಗಳನ್ನು ಹಂಚಿಕೆ ಮಾಡಿದರು.