ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಕಿವಿ ಅಚ್ಚು ತಂತ್ರಜ್ಞ ಹುದ್ದೆ ಖಾಲಿ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಿವಿ ಅಚ್ಚು ತಂತ್ರಜ್ಞ (ಇಯರ್ ಮೋಲ್ಡ್ ಟೆಕ್ನಿಷಿಯನ್) ರ ಹುದ್ದೆಗೆ ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಟಿಫಿಕೇಟ್ ಕೋರ್ಸ್ ಇನ್ ಇಯರ್ ಮೊಲ್ಡ್ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು ಉಡುಪಿ ದೂರವಾಣ ಸಂಖ್ಯೆ :0820-2533372, 2532222 ಇಮೇಲ್ : [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಜಿಲ್ಲಾ ಘಟಕದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.