ಮಂಗಳೂರು: ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್ಲೈನ್ ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 15/01/2023
ಸಂಸ್ಥೆ : ನವ ಮಂಗಳೂರು ಬಂದರು ಟ್ರಸ್ಟ್
ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆ : 1
ವೇತನ ಮಾಸಿಕ : ರೂ.70,000
ಉದ್ಯೋಗದ ಸ್ಥಳ : ಮಂಗಳೂರು
ಶೈಕ್ಷಣಿಕ ಅರ್ಹತೆ: ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA/ICMA ಪೂರ್ಣಗೊಳಿಸಿರಬೇಕು.
ವಯೋಮಿತಿ : ಈ ಹುದ್ದೆಗೆ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಫೈನಾನ್ಸಿಯಲ್ ಅಡ್ವೈಸರ್ & ಚೀಫ್ ಅಕೌಂಟ್ಸ್ ಆಫೀಸರ್
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010