ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಬ್ರಹ್ಮಾವರ: ಐತಿಹಾಸಿಕ ಮಹಾಕಾವ್ಯ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ಉಪ ಪ್ರಾಂಶುಪಾಲೆ ಸುಜಾತ, ಕನ್ನಡ ವಿಭಾಗದ ಮುಖ್ಯಸ್ಥೆ ಅನುಪಮಾ ಪಿ ಭಟ್, ಉಪನ್ಯಾಸಕರಾದ ಉದಯ್ ಕುಮಾರ್, ರೋಹನ್ ಉಪನ್ಯಾಸಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹಿಂದಿ ವಿಭಾಗದ ಉಪನ್ಯಾಸಕಿ ರಾಝಿಕಾ ನಿರೂಪಿಸಿದರು.