ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್ ಆಯ್ಕೆ

ಉಡುಪಿ: ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಹಿರಿಮೆಗೆ ಇನ್ನೊಂದು ಗರಿ ಸೇರ್ಪಡೆಯಾಗಿದೆ. ವರ್ಲ್ಡ್ ಅಸೋಸಿಯೇಶನ್ ಆಫ್ ಕಿಕ್ ಬಾಕ್ಸಿಂಗ್ ಅರ್ಗನೈಸೇಷನ್ಸ್ (ಡಬ್ಲ್ಯೂಎಕೆಒ) ವಕೊ ಇಂಡಿಯಾ ಇದರ ಅಂಗ ಸಂಸ್ಥೆಯಾದ ವಕೊ ಕರ್ನಾಟಕ ಇದರಿಂದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಗೆ ಸದಸ್ಯತ್ವದ ಮಾನ್ಯತೆ ದೊರೆತಿದೆ. ಉಡುಪಿ ಜಿಲ್ಲೆಯ ಕಿಕ್ ಬಾಕ್ಸಿಂಗ್ ಸಂಘಟನೆಯ ಅಧ್ಯಕ್ಷರನ್ನಾಗಿ ವಾಮನ್ ಪಾಲನ್ ಅವರನ್ನು ನೇಮಕ ಮಾಡಲಾಗಿದೆ.

ಆಗಸ್ಟ್ 11 ರಂದು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ವಕೊ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ಪೂಜಾ ಹರ್ಷ ರವರು ವಾಮನ್ ಪಾಲನ್ ರವರಿಗೆ ದೃಢೀಕರಣ ಪತ್ರವನ್ನು ನೀಡಿ ಸನ್ಮಾನಿಸಿದರು.

ಆಗಸ್ಟ್ 11ರಂದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧಾ ಕೂಟದಲ್ಲಿ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ಭಾಗವಹಿಸಿದ ಉಡುಪಿ ಜಿಲ್ಲೆಯ ಸೀತಾರಾಮ್ ಪೂಜಾರಿ, ಅಶೋಕ್ ಕುಲಾಲ್, ಗ್ಲೆನ್ ಮೌನಿತ್ ಹಾಗೂ ಪವನ್ ಕುಮಾರ್ ಇವರು ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ 5 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳನ್ನು ಪಡೆದಿದ್ದಾರೆ.

ಆ ಮೂಲಕ ಕಿಕ್ ಬಾಕ್ಸಿಂಗ್ ಕ್ರೀಡೆಯಲ್ಲಿ ಉಡುಪಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ ದೊರೆತಂತಾಗಿದೆ. ಇವರು ಆಗಸ್ಟ್ 26ರಿಂದ ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧಾಕೂಟಕ್ಕೆ ಆಯ್ಕೆಯಾಗಿದ್ದಾರೆ.