ವನಮಹೋತ್ಸವ ಆಚರಣೆ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಡಾ. ವಿ.ಎಸ್. ಆಚಾರ್ಯ ಜಿಲ್ಲಾ ತರಬೇತಿ ಕೇಂದ್ರ, ಪ್ರಗತಿ ನಗರ, ಮಣಿಪಾಲದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರು ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಉಡುಪಿ ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ಪಿಡಿಜಿ ಎನ್. ಎಮ್ ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಖಜಾಂಚಿ ಶ್ರೀ ಹರಿಪ್ರಸಾದ್ ರೈ, ಜಿಲ್ಲಾ ಕಾರ್ಯದರ್ಶಿ ಶ್ರೀ ಆನಂದ ಬಿ. ಅಡಿಗ, ರಾಜ್ಯ ಸಹಾಯಕ ಆಯುಕ್ತರಾದ ಶ್ರೀಮತಿ ಸುಮನಾ ಶೇಖರ್, ಶ್ರೀಮತಿ ಶುಭಾ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಶ್ರೀ ಯತೀಶ್ ಕುಮಾರ್, ಯೋಗ ಶಿಕ್ಷಕರಾದ ಶ್ರೀಮತಿ ಚೆನ್ನಮ್ಮ ಉಡುಪ ಹಾಗೂ ಶ್ರೀಮತಿ ಶೋಭಾ ಶೆಟ್ಟಿ, ಗೈಡ್ ಕಮಿಷನರ್ ಉಡುಪಿ ಶ್ರೀಮತಿ ಜ್ಯೋತಿ ಪೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಉಡುಪಿ ಇದರ ಜನರಲ್ ಮ್ಯಾನೇಜರ್ ಶ್ರೀ ರಾಜೇಶ್ ಶೇರಿಗಾರ್, ಎ.ಜಿ.ಎಂ. ಶ್ರೀ ಪ್ರವೀಣ್ ಕುಮಾರ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಬಡಗಬೆಟ್ಟು ಸೊಸೈಟಿಯ ಮ್ಯಾನೇಜರ್ ಶ್ರೀ ನವೀನ್ ಕೆ. ನೆರವೇರಿಸಿದರು. ಶ್ರೀಮತಿ ಅನುಷಾ ಕೋಟ್ಯಾನ್ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಶ್ರೀ ಪ್ರವೀಣ್ ಕುಮಾರ್ ವಂದಿಸಿದರು.