ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ರಸ್ತೆ ಸುರಕ್ಷತೆ ಅಡಿಯಲ್ಲಿ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದಲ್ಲಿ ಆಪ್ತ ಸಮಾಲೋಚಕರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರ ತಲಾ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  Udupi.nic.in ಅಥವಾ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.