ಆಗಸ್ಟ್ 15 ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಗಸ್ಟ್ 15 ರಂದು ಅಪರಾಹ್ನ 2 ಗಂಟೆಗೆ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಚಿತ್ರಕಲೆ, ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜಿಲ್ಲಾ ಬಾಲಭವನ ಬ್ರಹ್ಮಗಿರಿಯಲ್ಲಿ ನಡೆಸಲಾಗುತ್ತಿದ್ದು ಆಸಕ್ತರು ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ: 0820-2574978 ಹಾಗೂ 0820-2574972 ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.