ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28 ರಂದು ಬೆಳಗ್ಗೆ 9.30 ರಿಂದ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
ಕ್ರೀಡಾ ವಿಭಾಗದಲ್ಲಿ 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಬಾಂಬ್ ಇನ್ ದ ಸಿಟಿ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.