ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ನಗರಸಭಾ ನಿಧಿಯ ಶೇ. 5 ರ ವಿಕಲಚೇತನ ಕಲ್ಯಾಣ ಕಾರ್ಯಕ್ರಮದಡಿ ನಿವೇಶನ ಖರೀದಿ ಹಾಗೂ ಅಂಗವಿಕಲರಿಗೆ ಆರೋಗ್ಯ ವಿಮೆ ನೀಡುವ ಸಲುವಾಗಿ ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಪೌರಾಯುಕ್ತರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

















