ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿದೆ  ವಿವಿಧ ಉಪನ್ಯಾಸಕ ಹುದ್ದೆಗಳು, ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ: ನಗರದ ಕುಂಜಿಬೆಟ್ಟುವಿನಲ್ಲಿರುವ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು (UPMC) ಇಲ್ಲಿ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಡಾ. ಟಿ.ಎಂ.ಎ. ಪೈ ಫೌಂಡೇಶನ್ ಘಟಕವಾಗಿದ್ದು, ಉಡುಪಿ ಕುಂಜಿಬೆಟ್ಟುವಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕಾಲೇಜಿನಲ್ಲಿ ಬಿಸಿಎ ವಿಭಾಗಕ್ಕೆ ಪೂರ್ಣಕಾಲಿಕ ಉಪನ್ಯಾಸಕರ 2 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಎಂಸಿಎ, ಎಂಎಸ್‌ಸಿ (ಐಟಿ) ಅಥವಾ ಎಂಎಸ್‌ಸಿ (ಕಂಪ್ಯೂಟರ್ ಸೈನ್ಸ್) ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ NET, KSET ಅಥವಾ ಪಿಎಚ್‌ಡಿ ಅರ್ಹತೆ ಹೊಂದಿರಬೇಕು.

ಅದೇ ರೀತಿ ಕನ್ನಡ, ಇಂಗ್ಲಿಷ್, ಹಿಂದಿ ಹಾಗೂ ಸಂಸ್ಕೃತ ವಿಷಯಗಳಿಗೆ ತಲಾ ಒಂದು ಅರೆಕಾಲಿಕ ಉಪನ್ಯಾಸಕರ ಹುದ್ದೆ ಲಭ್ಯವಿದೆ. ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿರುವ ಹಾಗೂ NET, KSET ಅಥವಾ ಪಿಎಚ್‌ಡಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದಲ್ಲದೆ ಲ್ಯಾಬ್ಅಸಿಸ್ಟೆಂಟ್ ಹುದ್ದೆಗೆ ಕೂಡ ನೇಮಕಾತಿ ನಡೆಯಲಿದ್ದು, ಬಿಸಿಎ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಆಸಕ್ತ ಅಭ್ಯರ್ಥಿಗಳು ಪ್ರಕಟಣೆ ಹೊರಬಿದ್ದ ದಿನಾಂಕದಿಂದ 7 ದಿನಗಳ ಒಳಗೆ ತಮ್ಮ ಅರ್ಜಿಯನ್ನು [email protected] ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು ಎಂದು ಕಾಲೇಜು ಆಡಳಿತ ತಿಳಿಸಿದೆ.