ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ 13 ವೈದ್ಯಾಧಿಕಾರಿಗಳ ಹಾಗೂ 04 ಪಿ.ಹೆಚ್.ಸಿ.ಒ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.