ಅತ್ತೂರು: ಅತ್ತೂರು ಪರ್ಪಲೆ ಗಿರಿಯಲ್ಲಿ ಬುಧವಾರ ಬೆಳಗ್ಗಿನಿಂದ ರಾತ್ರಿಯವರೆಗೆ ಕೇಂಜ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಸರ್ಪ ಸಂಸ್ಕಾರ, ಆಶ್ಲೇಷ ಬಲಿ, ಅಘೋರ ಹೋಮ, ಉಚ್ಚಾಟನೆ, ಸುದರ್ಶನ ಹೋಮ ಹಾಗೂ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟಿನ ಸದಸ್ಯರು, ಸ್ಥಳೀಯ ಭಗವದ್ಭಕ್ತರು ಈ ಪುಣ್ಯ ಕಾರ್ಯದಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದರು.