ಉಡುಪಿ: ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ನಿರಾಮಯ ಯೋಜನೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















