ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ, ಕುಂದಾಪುರ ಇವರ ಸಹಯೋಗದಲ್ಲಿ ಸೆ. 22 ರಂದು ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಗಾಣಿಗ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.












