ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಸೇರ್ಪಡೆ

ಉಡುಪಿ: ಮಾಜಿ ಸಂಸದ ಹಾಗೂ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ (Congress) ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆ ಪಿ ಸಿ ಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಅವರು ತಿಳಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections) ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.