ಭೀಕರ ರಸ್ತೆ ಅಪಘಾತ: ಹಿರಿಯ ಆರ್ ಎಸ್ಎಸ್ ಮುಖಂಡ ವೆಂಕಟರಮಣ ಹೊಳ್ಳ ನಿಧನ

ಪುತ್ತೂರು:  ರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ದ ಹಿರಿಯ ಕಾರ್ಯಕರ್ತರೊಬ್ಬರು ಮೃತಪಟ್ಟ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು ಮುಂಜಾನೆ ವೇಳೆ ಸಂಭವಿಸಿದೆ.

ಮೃತರನ್ನು ಆರ್ ಎಸ್ಎಸ್ ಹಿರಿಯ ಕಾರ್ಯಕರ್ತ, ಬಂಟ್ವಾಳ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ.

ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ದುರ್ಘಟನೆ ನಡೆದಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.