ವಿಶ್ವಹಿಂದೂ ಪರಿಷತ್‌ ಪುಂಡ ಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ

ಉಡುಪಿ: ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧಿಕೃತವಾಗಿ ನೋಂದಣಿ ಆಗಿರುವ ಸಂಸ್ಥೆ. ಅದು ಬೇನಾಮಿ ಸಂಸ್ಥೆಯಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಆಧಾರ ರಹಿತ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಬುಧವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಶ್ವಹಿಂದೂ ಪರಿಷತ್‌ ಪುಂಡ ಪೋಕರಿಗಳ ಸಂಸ್ಥೆಯಲ್ಲ. ವಿಶ್ವ ಹಿಂದೂ ಪರಿಷತ್‌ಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹದ ಜವಾಬ್ದಾರಿ ನೀಡಲಾಗಿದೆ. ಹಿರಿಯ ಮುಂದಾಳುಗಳ ನೇತೃತ್ವದಲ್ಲಿ ನಿಧಿ ಸಂಗ್ರಹ ಕಾರ್ಯ ನಡೆಯುತ್ತಿದೆ ಎಂದರು.