ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.
ಕರ್ನಾಟಕ ಹೈಕೋರ್ಟ್ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಸಹ ನೇಮಿಸಲಾಗಿದೆ.












