ಉಡುಪಿ: ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶೀರೂರು ಮಠದ ವತಿಯಿಂದ ಉಮಾಶ್ರೀ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಲಾಯಿತು.
ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಮೊದಲಾದವರು ಉಪಸ್ಥಿತರಿದ್ದರು.