ವಿದ್ಯಾಪೋಷಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ: ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ ವಿದ್ಯಾರ್ಥಿ ವೇತನಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ ಬಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರು ಅಥವಾ ಉಡುಪಿ‌ಯ ಯಕ್ಷಗಾನ ಕಲಾರಂಗದ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ಆಗಸ್ಟ್ 20ರೊಳಗೆ ವಿದ್ಯಾಪೋಷಕ್, ಯಕ್ಷಗಾನ ಕಲಾರಂಗ, ಉಡುಪಿ-576101 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.