ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅ.21ರಂದು ವಿಜಯದಶಮಿ, ಅ.27ರಂದು ಚಂಡಿಕಾಯಾಗ ಪೂರ್ಣಾಹುತಿ

ಕಾಪು: ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ ಶರನ್ನವರಾತ್ರಿ ಮಹೋತ್ಸವ ಆರಂಭವಾಗಲಿದ್ದು, ಅಕ್ಟೋಬರ್ 21ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್ 27ರಂದು ಚಂಡಿಕಾಯಾಗದ ಪೂರ್ಣಾಹುತಿ ಹಾಗೂ ಮಹಾ ಅನ್ನಸಂತರ್ಪಣೆ ಜರುಗಲಿದೆ.

ಮಹೋತ್ಸವದ ಅಂಗವಾಗಿ ಪ್ರತಿದಿನ ಶ್ರೀದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ, ಪ್ರಸನ್ನ ಪೂಜೆ, ಗದ್ದಿಗೆ ಪೂಜೆ, ಹೂವಿನ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಕ್ಟೋಬರ್ 20ರವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಅ.19, ಸೋಮವಾರ: ದುರ್ಗಾಷ್ಟಮಿ ಹಾಗೂ ದುರ್ಗಾನಮಸ್ಕಾರ ಪೂಜೆಅ. 21, ಬುಧವಾರ: ವಿಜಯದಶಮಿ ಹಾಗೂ ಕಲಶ ವಿಸರ್ಜನೆ•ಅ. 27, ಮಂಗಳವಾರ: ಚಂಡಿಕಾಯಾಗ, ಪೂರ್ಣಾಹುತಿ ಹಾಗೂ ಮಹಾ ಅನ್ನಸಂತರ್ಪಣೆಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಭಕ್ತರು ದೇವಿಯ ಸನ್ನಿಧಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿಯವರು ಮನವಿ ಮಾಡಿದ್ದಾರೆ.