ವಿಜಯಪುರ: ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಅರುಣ್ ನಾಯಕ್ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.












