ಉಡುಪಿ, ಆಗಸ್ಟ್ 1: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯಲ್ಲಿ, 2019-20 ನೇ ಸಾಲಿನಲ್ಲಿ ವಿಕಲಚೇತನರಿಗೆ ಸ್ವ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಪರಿಷ್ಕತ ನಿಯಮಗಳಡಿಯಲ್ಲಿ ಶೇ. 50 ಬ್ಯಾಂಕಿನಿಂದ ಸಾಲ ಮತ್ತು ಶೇ. 50 ಸಬ್ಸಿಡಿ ಇಲಾಖೆಯಿಂದ ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಕೂಡಾ ಹೊಸದಾಗಿ ಈ ಸಾಲಿನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಅಗಸ್ಟ್ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ, ಮಾರ್ಗಸೂಚಿ ಮತ್ತು ಮಾಹಿತಿಗಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲ್ಲೂಕು ಪಂಚಾಯತ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು (MRW) ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ ದೂ.ಸಂ: 0820-2574810/ 811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.