ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ: ವರ್ಚುವಲ್ ಮೂಲಕ ಭಾಗವಹಿಸಿದ ಪ್ರಧಾನಿ ಮೋದಿ; ಮತ್ಯಮೇಳದ ಯಶಸ್ಸಿಗೆ ಹಾರೈಕೆ

ಉಡುಪಿ: ದ.ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು, ಇವರ ನೇತೃತ್ವದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡವೆಸ್ ಸಂಸ್ಥೆ ಶಿರಸಿ ಇವರ ಸಹಭಾಗಿತ್ವದಲ್ಲಿ ರಚಿತವಾದ ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ವತಿಯಿಂದ ಡಿಸೆಂಬರ್ 2 ಮತ್ತು 3 ರಂದು ಉಡುಪಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಮತ್ಸ್ಯಮೇಳವನ್ನು ಯಶಸ್ವಿಗೊಳಿಸುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಕರೆ ನೀಡಿದರು.

ವರ್ಚುವಲ್ ಮೂಲಕ ನೇರಪ್ರಸಾರದಲ್ಲಿ ಪ್ರಧಾನಿ ಮೋದಿಜಿಯವರು ಉಪಸ್ಥಿತರಿದ್ದ ಕೇಂದ್ರ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮೀನು ಮತ್ತು ಸಾಗರೋತ್ಪನ್ನ ಖಾದ್ಯಗಳ ರಸದೌತಣವನ್ನು ಸವಿಯಲು ಮತ್ಸ್ಯಮೇಳದಲ್ಲಿ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಕರೆನೀಡಿದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

ನೇರಪ್ರಸಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಧಾನಿ ಮೋದಿ, ಲೋಕಸಭಾ ಸದಸ್ಯೆ ಹಾಗೂ ಶಾಸಕರು ಕಾರ್ಯಕ್ರಮದ ಯಶಸ್ಸಿಗೆ ಕರೆ ನೀಡಿದ್ದು ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಸ್ಥೆ ತಿಳಿಸಿದೆ.