ಉಡುಪಿ: ಬ್ರಹ್ಮಾವರ ತಾಲೂಕು ಕಾಡೂರು ಗ್ರಾಮವೃತ್ತದಲ್ಲಿ ಖಾಲಿ ಇರುವ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾಡೂರು ಗ್ರಾಮ ಆಡಳಿತ ಅಧಿಕಾರಿ ಕಚೇರಿ ಅಥವಾ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ನೇಮಕಾತಿ ಪ್ರಕ್ರಿಯೆಯು ಸರ್ಕಾರದ ಸೂಚನೆಯನ್ವಯ ನಡೆಯಲಿದೆ ಎಂದು ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.















