ಉಡುಪಿ: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನ. ಸರ್ಕಾರ ನೀಡಿರುವ ಸೂಚನೆಗಳನ್ನು ಆಧರಿಸಿ, ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

















