ಲಿಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಹಾಗೂ ಪುತ್ರನ ವಿರುದ್ಧ ಮರ್ಡರ್ ಕೇಸ್ ದಾಖಲು

ನವದೆಹಲಿ: ಉತ್ತರ ಪ್ರದೇಶದ ಲಿಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಹಾಗೂ ಇವರ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್​​ಐಆರ್ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 120ಬಿ, 147, 148, 149, 279, 302, 304ಎ ಅಡಿಯಲ್ಲಿ ದೂರು ದಾಖಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿಯಂತೆ ಕೇಂದ್ರ ಸಚಿವರ ಪುತ್ರನ ಕಾರು ಹರಿಸಿದ ನಂತರ ಹಿಂಸಾಚಾರ ಉಂಟಾಗಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ರೈತರೂ ಕೂಡ ಸಾವನ್ನಪ್ಪಿದ್ದಾರೆ. ನಾಲ್ವರು ರೈತರು ಹಾಗೂ ಇತರರರು ಮೃತಪಟ್ಟಿದ್ದಾರೆ.

ಘಟನೆ ನಡೆದ ಕೆಲವೇ ಹೊತ್ತಲ್ಲೇ ಉತ್ತರ ಪ್ರದೇಶ ಸರ್ಕಾರದ ಉಪಮುಖ್ಯಮಂತ್ರಿ ಕೇಶ್ ಪ್ರಸಾದ್ ಮೌರ್ಯ ಅವರು ಭೇಟಿ ನೀಡಿದ್ದಾರೆ. ರೈತರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.