ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರನಾದ ವಿರಾಟ್ ಕೊಹ್ಲಿ

ಅಡಿಲೇಡ್: ಅಡಿಲೇಡ್‌ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧ ಭಾರತದ ಗುಂಪು 2 ಪಂದ್ಯದಲ್ಲಿ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ವಿರಾಟ್ ತಮ್ಮ ಅಜೇಯ ಅರ್ಧಶತಕದ ಹಾದಿಯಲ್ಲಿ ತಮ್ಮ 16 ನೇ ರನ್ ಬಾರಿಸಿದಾಗ, ಅವರು ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರ 1016 ರನ್‌ಗಳ ದಾಖಲೆಯನ್ನು ಮುರಿದು ಪ್ರಥಮ ಸ್ಥಾನವನ್ನು ಅಲಂಕರಿಸಿದರು.

Image

ಇದು ಈ ಟೂರ್ನಿಯ ನಾಲ್ಕು ಪಂದ್ಯಗಳಲ್ಲಿ ಕೊಹ್ಲಿ ಅವರ ಮೂರನೇ ಅರ್ಧಶತಕವಾಗಿದೆ.

ಜಯವರ್ಧನೆ 31 ಇನ್ನಿಂಗ್ಸ್‌ಗಳಲ್ಲಿ 1016 ರನ್ ಗಳಿಸಿದ್ದರೆ, ಕೋಹ್ಲಿ ತಮ್ಮ 23ನೇ ಇನ್ನಿಂಗ್ಸ್‌ನಲ್ಲೇ ಆ ದಾಖಲೆಯನ್ನು ಮುರಿದಿದ್ದಾರೆ. ಕೊಹ್ಲಿ ಈಗ 13 ಟಿ20 ವಿಶ್ವಕಪ್ ಅರ್ಧಶತಕಗಳನ್ನು ಹೊಂದಿದ್ದಾರೆ.

ಕೊಹ್ಲಿ 44 ಎಸೆತಗಳಲ್ಲಿ ಔಟಾಗದೆ 64 ರನ್ ಗಳಿಸಿದರು. ಬಾಂಗ್ಲಾದೇಶದ ವಿರುದ್ಧ ಭಾರತ 184/6 ಸ್ಕೋರ್ ಗಳಿಸಿದೆ.