ವಿಷ್ಣು ನಟನೆಯ ‘ಹಲೋ ಡ್ಯಾಡಿ’ ಸಿನಿಮಾ ನಟ ನಿಧನ

ಡಾ. ವಿಷ್ಣುವರ್ಧನ್ ಅಭಿನಯದ ಹಲೋ ಡ್ಯಾಡಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಿತಿನ್ ಬಾಲನಟರಾಗಿ ನಟಿಸಿದ ನಿತಿನ್ ಗೋಪಿ ಇಂದು ನಿಧನರಾಗಿದ್ದಾರೆ. ‘ಹಲೋ ಡ್ಯಾಡಿ’ ಸಿನಿಮಾದಲ್ಲಿ ಬಾಲ ನಟನಾಗಿ ಅಭಿನಯಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು
ಅದರಲ್ಲೂ ‘ಶಾಲೆಗೆ ಈ ದಿನ ರಜಾ’ ಹಾಡಿನ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು .
ನಿತಿನ್ ಗೋಪಿ ಅವರಿಗೆ ಇಂದು ಮುಂಜಾನೆ 5 ಗಂಟೆಗೆ ಸುಮಾರಿಗೆ ತ್ರೀವ ಹೃದಯಾಘಾತ ಆಗಿದೆ. ಕೂಡಲೇ ನಟನ ಅಪ್ಪ ಅಮ್ಮ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ದಾರಿ ಮಧ್ಯೆಯೇ ನಿತಿನ್ ಇಹಲೋಕ ತ್ಯಜಿಸಿದ್ದಾರೆ ಎಂದು ಕಿರುತೆರೆ ಸಂಘದ ಅಧ್ಯಕ್ಷ ಶಿವಕುಮಾರ್ ಹೇಳಿಕೆ ನೀಡಿದ್ದಾರೆ

ಬೆಂಗಳೂರಿನ ಇಟ್ಟುಮಡುವಿನ ಅಪಾರ್ಟ್ ಮೆಂಟ್​ನಲ್ಲಿ ನಿತಿನ್ ಅಪ್ಪ ಅಮ್ಮನ ಜೊತೆ ವಾಸವಿದ್ದರು. ಚಿರಬಾಂಧವ್ಯ, ನಿಶಬ್ಧ, ಕೆರಳಿದ ಕೇಸರಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಿತಿನ್ ಬಾಲ ನಟನಾಗಿ ಅಭಿನಯಿಸಿದ್ದರು. ಶ್ರುತಿ ನಾಯ್ಡು ಪ್ರೊಡಕ್ಷನ್​ನಲ್ಲಿ ಹಾಗೂ ಬಾಲಾಜಿ ಟೆಲಿಫಿಲಮ್ಸ್ ಅಡಿಯಲ್ಲಿ ಮೂಡಿ ಬಂದ ಧಾರಾವಾಹಿಗಳಿಗೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು.

ಕನ್ನಡದಲ್ಲಿ ಮಾತ್ರವಲ್ಲ ತಮಿಳು ಧಾರಾವಾಹಿಯನ್ನೂ ಅವರು ನಿರ್ದೇಶನ ಮಾಡಿದ. ಇವರು 39ರ ವಯಸ್ಸಿನಲ್ಲಿಯೇ ಹೊಸ ಧಾರಾವಾಹಿಯನ್ನು ನಿರ್ದೇಶನ ಮಾಡಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಅಂದ ಹಾಗೆ ಇವರು ಖ್ಯಾತ ಕೊಳಲು ವಾದಕ ಗೋಪಿ ಅವರ ಪುತ್ರ. ನಿತಿನ್ ಅಗಲಿಕೆಗೆ ಕಿರುತೆರೆ ಹಾಗು ಸಿನಿಮಾರಂಗದವರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲಾಗಿತ್ತು. ವಿಷ್ಣು ಅವರ 50 ಸೇನಾನಿಗಳು, ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಿದ್ದರು. 40 ಲಕ್ಷ ರೂ. ಖರ್ಚಾಗಿದ್ದ ಈ ಕಾರ್ಯಕ್ರಮದಲ್ಲಿ ಎರಡೂವರೆ ಲಕ್ಷ ಜನರು ಭಾಗವಹಿಸಿದ್ದರು.
ವಿಷ್ಣುವರ್ಧನ್‌ ಹೆಸರಲ್ಲಿ ಗೌರವವೊಂದು ಲಭ್ಯವಾಗಿದ್ದ ಖುಷಿಯಲ್ಲಿದ್ದ ಅಭಿಮಾನಿಗಳಿಗೆ ಈಗ ಆಘಾತವಾಗಿದೆ. ದಾದಾ ಜೊತೆ ನಟಿಸಿದ ನಟ ಸಾವನ್ನಪ್ಪಿದ್ದಾರೆ ಎಂಬ ವಿಚಾರ ಅಭಿಮಾನಿಗಳ ಕಣ್ಣೀರಿಗೆ ಕಾರಣವಾಗಿದೆ.