ಉಡುಪಿ, ಜೂನ್ 17: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದು, ಒಂದೇಕಡೆ ಹೊಂದಿಕೊಂಡಿರುವಂತೆ 2 ರಿಂದ 5 ಎಕರೆ ಜಮೀನು ಹೊಂದಿರಬೇಕು. 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯ ಸರ್ಕಾರದ ಯೋಜನೆಗಳ ವಿವರ:
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆ. ರಾಜ್ಯ ಸರ್ಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ 40000 ರೂ. ಮತ್ತು ಪಟ್ಟಣ ಪ್ರದೇಶದವರಿಗೆ 55000 ರೂ. ಗಳಿಗಿಂತ ಕಡಿಮೆ ಇರಬೇಕು. (ಅರಿವು ಯೋಜನೆಗೆ ವಾರ್ಷಿಕ ವರಮಾನ 3.50 ಲಕ್ಷಗಳ ಮಿತಿ ಇರಬೇಕು).
ಅರ್ಜಿ ನಮೂನೆಗಳನ್ನು ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಜುಲೈ 12 ರ ಒಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರ ಒಳಗೆ ಸಲ್ಲಿಸಬೇಕು, ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ವೆಬ್ಸೈಟ್ www.karnataka.gov.in/kvcdcl ರಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.












