ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲರಾಗಿರುವ  ಗಣೇಶ‌ ಮೊಗವೀರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲಾವಿದ ರಾಮ್ ಶೆಟ್ಟಿ ಅತ್ತಿಕಾರ್  ಕುಂದಾಪ್ರ ಕನ್ನಡ ಆಚರಣೆಯ ಮಹತ್ವದ ಕುರಿತು ಮಾತನಾಡಿದರು.

ಪ್ರಾಂಶುಪಾಲ ಗಣೇಶ್ ಮೊಗವೀರ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆ ಅಗತ್ಯತೆ ಹಾಗೂ ಕುಂದಕನ್ನಡದ ಸಾಧಕರ ಕುರಿತು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವಾರ, ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಹಾಗೂ ಭೌತಶಾಸ್ತ್ರ ಉಪನ್ಯಾಸಕ ಕಾರ್ತೀಕೇಯ ಎಮ್.ಎಸ್., ಆಡಳಿತಾಧಿಕಾರಿ ಹಾಗೂ‌ ಕಾಲೇಜಿನ‌ ದೈಹಿಕ ಶಿಕ್ಷಣ ನಿರ್ದೇಶಕರಾಗಿರು‌ವ  ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು‌.

ಕಾಲೇಜಿನ ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳನ್ನು ಪರಿಚಯಿಸಿ, ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ರಸಾಯನಶಾಸ್ತ್ರ ಉಪನ್ಯಾಸಕ ಶಂಕರನಾರಾಯಣ ಉಪಧ್ಯಾಯರು ವಂದಿಸಿದರು.