ವಿಶ್ವ ಕುಂದಾಪುರ ‌ಹಬ್ಬ

ಪ್ರೆಸಕ್ಲಬ್ ನಲ್ಲಿ ಮಾತನಾಡಿದ ಅವರು,ಐದನೇ ಬಾರಿಗೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ ಆಗ್ತಿದೆ.ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.ಸರಿಯಾಗಿ 9 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ‌ನಡೆಯಲಿದ್ದು ಶಾಸಕ ಕಿರಣ್‌ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿಲಿದ್ದಾರೆ.ಆಂಕರ್-ಬೆಂಗಳೂರಿನಲ್ಲಿ ಕುಂದಾಪುರ ಕನ್ನಡ ಹಬ್ಬ ಜುಲೈ 23ರ ಭಾನುವಾರ ‌ಆಯೋಜನೆ ಗೊಂಡಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನ ಅಧ್ಯಕ್ಷ ‌ದೀಪಕ್ ಶೆಟ್ಟಿ ಹೇಳಿದ್ದಾರೆ.ಸಂಜೆ 5 ಗಂಟೆಯ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ನಟ- ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಯಕ್ಷಗಾನ, ಹಾಡು, ನೃತ್ಯ,ಮಾತಿನ ಚಾವಡಿ,ಖಾದ್ಯ ವೈವಿದ್ಯ,ನಾಟಕ ಕಾರ್ಯಕ್ರಮಗಳು ಇರಲಿದೆ ಎಂದಿದ್ದಾರೆ. ಹಾಗೇ ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ವೇದಿಕೆಯಾಗಿದೆ.
ಕುಂದಾಪುರದ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸುವ ಹಾಲುಬಾಯಿ, ಕೊಟ್ಟೆ ಕಡುಬು, ಗೋಲಿಬಜೆ, ಬನ್ಸ್, ಸುಕ್ಕಿನ್ ಉಂಡೆ, ಎಳ್ ಬಾಯ್ರ್, ಹೆಸ್ರು ಬಾಯ್ರ್ ನಂತಹ ವಿವಿಧ ಪಾನಕಗಳು ವಿಶೇಷವಾಗಿದೆ.ಹಾಗೇ ಹಬ್ಬದ ವಿಶೇಷ ತರಕಾರಿ ಊಟ, ಇಡ್ಲಿ ಕುಂದಾಪ್ರ ಕೋಳಿ ಸುಕ್ಕ, ಬರಿಯಾನಿ, ಚಟ್ಲಿ ಸಾರು ಇನ್ನಿತರ ಅಪರೂಪದ ಖಾದ್ಯಗಳು ಕುಂದಾಪ್ರ ಕನ್ನಡ ಹಬ್ಬಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಲು ವಿಶೇಷ ಆಕರ್ಷಣೆಯಾಗಿದೆ ಎಂದರು.. ಟೀಮ್ ಕುಂದಾಪುರಿಯನ್ಸ್ ತಂಡದಿಂದ ಮಿಂಚುಳ- ಇದ್ ಕತ್ಲಿ-ಬೆಳಗಿನ ಕಥಿ ಎಂಬ ವಿಶೇಷ ನಾಟಕ‌ವನ್ನು ನೆರೆದವರಿಗೆ ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಮತ್ತು ಕನಸ್ಸಿನ ಕುಂದಾಪುರ ‌ಕುರಿತಾಗಿ ಪ್ರದರ್ಶಿಸಲಿದ್ದಾರೆ. ಕರಾವಳಿಯ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ವಯಸ್ಕರರಿಗಾಗಿ ಹಗ್ಗ ಜಗ್ಗಾಟ, ದಂಪತಿಗಳಿಗಾಗಿ ಪ್ರತ್ಯೇಕ ಕ್ರೀಡೆಗಳು, ಮಕ್ಕಳಿಗೆ ಹೂವಾಡಗಿತ್ತಿ, ಸೈಕಲ್ ಟೈರ್ ಓಟ, ಹಣೆಬೊಂಡ ಓಟ, ಗಿರ್ಗಿಟ್ಲೆ ಓಟ, ಚಿತ್ರಕಲೆ, ಮಹಿಳೆಯರಿಗೆ ಹಲಸಿನ ಕೊಟ್ಟೆ ಕಟ್ಟುವುದು ಇನ್ನಿತರ ಸ್ಪರ್ಧೆಗಳು ಹಬ್ಬದ ಬಯಲಿನ ಕಲರವವನ್ನು ಇಮ್ಮಡಿಸಲಿದೆ. ಈ ಸಂದರ್ಭದಲ್ಲಿ ಕುಂದಾಪುರ ಕನ್ನಡ ಪ್ರತಿಷ್ಠಾನ ಪ್ರಮುಖರಾದ ಪ್ರಮೋದ್ ಚಂದ್ರ ಭಂಡಾರಿ,ನರಸಿಂಹ ಬೀಜಾಡಿ, ರಾಘವೇಂದ್ರ ಕಾಂಚನ್,ವಿಜಯ್ ಶೆಟ್ಟಿ,ಅಜಿತ್ ಶೆಟ್ಟಿ ಉಳ್ತೂರ್ ಉಪಸ್ಥಿತರಿದ್ದರು