ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಸಮಾರಂಭ; ಸಾಧಕರಿಗೆ ಸನ್ಮಾನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ, ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉಡುಪಿ ಶಾಸಕರಾದ ಕೆ.ರಘುಪತಿ ಭಟ್,ಪೂರ್ಣಪ್ರಜ್ಞ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕರಾದ ಡಾ.ಟಿ.ಎಸ್.ರಮೇಶ್, ಶ್ರೀಮಠದ ಕಲಾಸಂಘಟಕರಾದ ಪ್ರಾದೇಶ ಆಚಾರ್ಯ, ಖ್ಯಾತ ಯಕ್ಷಗಾನ ಕಲಾವಿದರಾದ ವಾಸುದೇವ ರಂಗಾ ಭಟ್ಟ, ವಿದ್ವಾಂಸರಾದ ಹೆರ್ಗ ವಿದ್ವಾನ್ ರವೀಂದ್ರ ಭಟ್,ಖ್ಯಾತ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಮತ್ತು ಶ್ರೀಮಠದ ಕಾಲ ಸಲಹೆಗಾರರಾದ ಪುರುಷೋತ್ತಮ ಅಡ್ವೆ ಅವರನ್ನು ಸನ್ಮಾನಿಸಿ ಅನುಗ್ರಹ ಸಂದೇಶ ನೀಡಿದರು.

ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥಶ್ರೀಪಾದರು,ಪಲಿಮಾರು ಹಿರಿಯ ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು ಮತ್ತು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಅನುಗ್ರಹ  ಆಶೀರ್ವಚನ ನೀಡಿದರು.

ಅಭ್ಯಾಗತರಾಗಿ ಕೆನರಾ ಬ್ಯಾಂಕಿನ ಆಡಳಿತ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಲ್.ವಿ.ಪ್ರಭಾಕರ,ಕರ್ನಾಟಕ ಸರಕಾರದ ನಿವೃತ್ತ ಅಧಿಕಾರಿಗಳಾದ ಟಿ.ಶ್ಯಾಮ ಭಟ್ ಅವರು ಭಾಗವಹಿಸಿದ್ದರು.

ಮಠದ ವ್ಯವಸ್ಥಾಪಕರಾದ ಗೋವಿಂದರಾಜ್  ಸ್ವಾಗತಿಸಿದರು.ಮಠದ ಆಸ್ಥಾನ ವಿದ್ವಾಂಸರಾದ ಕೃಷ್ಣರಾಜ ಭಟ್ ಕುತ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.