ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತ ಆಚರಿಸುತ್ತಿರುವ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಭೇಟಿಯಾಗಿ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು.
ಇದೇ ವೇಳೆ ಶ್ರೀಕೃಷ್ಣ ದೇವರು ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳು ಮತ್ತು ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ದರ್ಶನವನ್ನೂ ಪಡೆದರು.