ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ 18 ವರ್ಷ ಮೇಲ್ಪಟ್ಟವರಿಗೆ, ‘ವಿಶನ್ ಫಾರ್ ಇಂಡಿಯಾ 2047’ ಎಂಬ ವಿಷಯದ ಕುರಿತು ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆಯಲ್ಲಿ ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಅಂತರ್ದೇಶೀಯ ಪತ್ರದಲ್ಲಿ ಬರೆದ ಕೈಬರಹದ ಪ್ರತಿಯನ್ನು ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇವರಿಗೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.indiapost.gov.in, www.karnatakapost.gov.in ಅಥವಾ
ದೂರವಾಣಿ ಸಂಖ್ಯೆ: 0820-2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.