ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯತೀರ್ಥ ಶ್ರೀಪಾದರು ಗೌರವಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು. ಅರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಸಮಿತಿಯ ಪದಾಧಿಕಾರಿಗಳುಮೊದಲಾದವರು ಉಪಸ್ಥಿತರಿದ್ದರು.












