ಉಡುಪಿ ಶ್ರೀ ಕೃಷ್ಣಮಠಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು   ಎ.19 ರಂದು ಮಠಕ್ಕೆ ಆಗಮಿಸಿ, ದೇವರ ದರ್ಶನ ಪಡೆದು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಉಡುಪಿ ಜಿಲ್ಲಾ ಬಿ.ಜೆ.ಪಿ.ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ಕಾಪು ಶಾಸಕರಾದ ಲಾಲಾಜಿ ಮೆಂಡನ್, ಮುಖಂಡರಾದ ಉದಯಕುಮಾರ್ ಶೆಟ್ಟಿ, ಮಠದ ದಿವಾನರಾದ ವರದರಾಜ ಆಚಾರ್, ಪರ್ಯಾಯ ಸಮಿತಿಯ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.