ಪೆರ್ಡೂರು ಅನಂತ ಸೌರಭದಲ್ಲಿ ವಾಯ್ಸ್ ಆಫ್ ಚಾಣಕ್ಯ -2025: ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಸೆಮಿ ಫೈನಲ್.

ಪೆರ್ಡೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಉದಯಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್‌ ಇವರ ಸಹಯೋಗದೊಂದಿಗೆ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2025 ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಡಿ.7ರಂದು ಮಧ್ಯಾಹ್ನ 1.30ರಿಂದ ರಿಂದ ಪೆರ್ಡೂರು ಎಪಿಟಿ ಶಾಲೆ ಎದುರಿರುವ ಅನಂತ ಸೌರಭ ಸಭಾಂಗಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಪೆರ್ಡೂರು ಬಂಟರ ಸಂಘ ಹಾಗೂ ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ(ನಿ) ಇದರ ಅಧ್ಯಕ್ಷ ಕೆ. ಶಾಂತರಾಮ ಸೂಡ ಉದ್ಘಾಟಿಸಲಿದ್ದು ಕುಂಬಾರರ ಗುಡಿ ಕೈಗಾರಿಕಾ ಸಂಘ, ಪೆರ್ಡೂರು ಇದರ ಅಧ್ಯಕ್ಷ ಸಂತೋಷ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುನಿಯಾಲು ಉದಯ ಕೃಷ್ಣಯ್ಯಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು,ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ,ಹಿರಿಯಡ್ಕ ರೈತರ ಸಹಕಾರಿ ಸಂಘ ಇದರ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಎಸ್.ಕೆ. ಗೋಲ್ಡಸ್ಮಿತ್ ಇಂಡಸ್ಟ್ರೀಯಲ್ ಕೋ- ಅಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು, ಉದ್ಯಮಿ ಸತೀಶ್ ಶೆಟ್ಟಿ ಕುತ್ಯಾರುಬೀಡು, ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿ ಉಡುಪಿ ಇಲ್ಲಿನ ಆಡಳಿತ ನೃತ್ಯ ನಿರ್ದೇಶಕ ಮಂಜಿತ್ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಮಾರಂಭ ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚಾಣಕ್ಯ ಸಂಸ್ಥೆಯ ಪ್ರಾಂಶುಪಾಲೆ ವೀಣಾ ಯು ಶೆಟ್ಟಿ ವಹಿಸಲಿದ್ದು, ರೈತರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ಧಿಕಾರಿ ಸುಧಾಕರ್ ಕುಲಾಲ್ ಪಟ್ಲ, ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ರಾಜಕುಮಾರ್ ಶೆಟ್ಟಿ,ಪೆರ್ಡೂರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಕೆ. ಶೆಟ್ಟಿ ಕುತ್ಯಾರು ಬೀಡು,ಪೆರ್ಡೂರು ಯುವಕ ಸಂಘದ ಅಧ್ಯಕ್ಷ ಪ್ರಸಾದ ಆಚಾರ್ಯ, ಗೆಳೆಯರ ಬಳಗದ ಅಧ್ಯಕ್ಷ ನಿತಿನ್ ಮಂಡನ್, ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕಿಳಂಜೆ, ಪ್ರಗತಿಪರ ಕೃಷಿಕ ಪ್ರವೀಣ್ ಕುಮಾರ್, ಚಾಣಕ್ಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 30 ಗಾಯಕರು ಸ್ಪರ್ಧಿಸಲಿದ್ದು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ವಿತರಣೆ ಹಾಗೂ ಕಾರ್ಯಕ್ರಮದ ನಡುವೆ ಚಾಣಕ್ಯ ಡ್ಯಾನ್ಸ ಅಕಾಡೆಮಿ ಪೆರ್ಡೂರು ತಂಡದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.