ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಭಾನುವಾರದಂದು ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ ಸುವರ್ಣ ರಕ್ತ ನಿಧಿ ವಿಭಾಗದ ವೈದ್ಯೆ ಕಾವ್ಯ , ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ ಶೆಟ್ಟಿ, ಪ್ರಮೀಳ ಹರೀಶ್, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸತೀಶ್ ಸಾಲ್ಯಾನ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರದಾಧಿಕಾರಿಗಳಾದ ಅಶ್ವಿನಿ ಶೆಟ್ಟಿ, ಪೂರ್ಣಿಮಾ ಶೆಟ್ಟಿ, ಮಾಯಾ ಕಾಮತ್ , ಸುಧಾ, ನೀರಜಾ ಶೆಟ್ಟಿ, ಪ್ರಭಾ ರಾವ್, ಸುಜಲ ಸತೀಶ್ ,ಶಿಲ್ಪ ಭಟ್, ಸರೋಜಾ ಶೆಟ್ಟಿ, ಲೈಲಾ, ಇಂದಿರಾ, ಶೈಲಾ ಮೊದಲಾದವರು ಉಪಸ್ಥಿತರಿದ್ದರು.