ಫಾರ್ಚ್ಯೂನ್ ಕಾಲೇಜು ವತಿಯಿಂದ ಆ.12ರಂದು ಬ್ರಹ್ಮಾವರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಬ್ರಹ್ಮಾವರ: ಬ್ರಹ್ಮಾವರದ Fortune College of Paramedical Sciences ವತಿಯಿಂದ ಆ.12ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಕುಂದಾಪುರದ Indian Red Cross Society Blood Centre, ಲಯನ್ಸ್ ಕ್ಲಬ್ ಬ್ರಹ್ಮಗಿರಿ, ಮೂಡಹಾಡು ಪಾಂಡೇಶ್ವರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಮಾಬುಕಳದ ಸಾಮ್ರಾಜ್ಞಿ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಶಿಬಿರ ನಡೆಯಲಿದೆ.

ಕಾಲೇಜಿನ ಆಡಿಟೋರಿಯಂನಲ್ಲಿ ಬೆಳಗ್ಗೆ 9 ಗಂಟೆಯಿಂದ ಶಿಬಿರ ಆರಂಭವಾಗಲಿದೆ. ಬಾಂಧವ್ಯ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಸಾಲುಮರದ ತಿಮ್ಮಕ್ಕ ರಾಷ್ಟ್ರೀಯ ಹಸಿರು ಪ್ರಶಸ್ತಿ ಪುರಸ್ಕೃತ ದಿನೇಶ್ ಬಾಂಧವ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Fortune Academy of Health Sciences ಅಧ್ಯಕ್ಷ ಡಾ. ತರಣಾಥ್ ಶೆಟ್ಟಿ, Indian Red Cross Society Blood Centre, Kundapura ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ, Fortune Academy of Health Sciences ಪ್ರಾಂಶುಪಾಲೆ ಪ್ರೊ. ಸ್ಮಿತಾಮೋಳ್ ಇ.ಎಂ., ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ವೆಂಕಟೇಶ್ ಪೂಜಾರಿ ಹಾಗೂ ಲಯನ್ಸ್ ಕ್ಲಬ್ ಬ್ರಹ್ಮಗಿರಿ ಅಧ್ಯಕ್ಷ ಎಲ್.ಎನ್. ಹರೀಶ್ ಕೊಟ್ಟಾರಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

‘ರಕ್ತದಾನ ಮಾಡಿ–ಜೀವ ಉಳಿಸಿ’ ಎಂಬ ಸಂದೇಶದೊಂದಿಗೆ ನಡೆಯಲಿರುವ ಶಿಬಿರದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.