ವಾಕ್​ ಇನ್​ ಇಂಟರ್​ವ್ಯೂ :ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ;

ಶಿವಮೊಗ್ಗ: ಗುತ್ತಿಗೆ ಆಧಾರದಡಿ ಒಟ್ಟು 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಪಶು ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳನ್ನು ವಾಕ್​ ಇನ್​ ಇಂಟರ್​ವ್ಯೂ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು ಬಿಎಸ್ಸಿ ಪದವಿ, ಪಿಎಚ್​ಡಿ ಪದವಿ ಪಡೆದಿರಬೇಕು. ಯಾವುದೇ ವಯೋಮಿತಿ ಇಲ್ಲ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ
ಹುದ್ದೆಗಳ ವಿವರ : ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪಶು ವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ಪರೋಪಜೀವಿ ಶಾಸ್ತ್ರ ವಿಭಾಗ, ಜಾನುವಾರು ಸಾಕಣಿಕೆ ಸಂಕೀರ್ಣ ವಿಭಾಗ, ಪಶು ವೈದ್ಯಕೀಯ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶು ವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷಕಿರಣ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ವಿಭಾಗ, ಚಿಕಿತ್ಸಾ ರೋಗಶಾಸ್ತ್ರದಲ್ಲಿ ಹುದ್ದೆಗಳು ಖಾಲಿ ಇವೆ.

.ಸೂಚನೆ: ವಾಕ್​ ಇನ್​ ಇಂಟರ್​ವ್ಯೂನಲ್ಲಿ ಹಾಜರಾಗುವ ಅಭ್ಯರ್ಥಿಗಳು ತಮ್ಮ ಹೆಸರು, ವಿವರಗಳನ್ನು ಕಚೇರಿಯಲ್ಲಿ ನೋಂದಾಯಿಸಬೇಕು.

ವಾಕ್​ ಇನ್​ ಇಂಟರ್​ವ್ಯೂ: ಜುಲೈ 13 ರಂದು ಬೆಳಗ್ಗೆ 11ಗಂಟೆಗೆ ಪಶು ವೈದ್ಯಕೀಯ ಕಾಲೇಜು​, ವಿನೋಬಾ ನಗರ್​, ಅಂಚೆ ಸಂಖ್ಯೆ ನಂ. 53, ಶಿವಮೊಗ್ಗ- 577204 ರಲ್ಲಿ ನೇರ ಸಂದರ್ಶನ ನಡೆಯುತ್ತದೆ.

ನೇರ ಸಂದರ್ಶನಕ್ಕೂ 30 ನಿಮಿಷ ಮುನ್ನ ಸ್ಥಳದಲ್ಲಿ ಇರಬೇಕು. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಶೈಕ್ಷಣಿಕ ದಾಖಲೆಗಳು, ಮೀಸಲು ಪ್ರಮಾಣ ಪತ್ರಗಳು ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಬರಬೇಕು. ಅಧಿಕೃತ ಅಧಿಸೂಚನೆ ಸೇರಿದಂತೆ ಪ್ರಮುಖ ಮಾಹಿತಿಯನ್ನು kvafsu.edu.in ಅಲ್ಲಿ ಪಡೆದುಕೊಳ್ಳಬಹುದು