ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 21 ರಂದು
ಬೆಳಗ್ಗೆ 10.30 ಕ್ಕೆ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್), ಮ್ಯಾಟ್ರಿನ್ ದಿಯಾ, ಶಿವಳ್ಳಿ, ಕುಂಜಿಬೆಟ್ಟು, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.