ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾ ಘಟಕದ
ಐ.ಡಿ.ಎಸ್.ಪಿ ಕಾರ್ಯಕ್ರಮದಲ್ಲಿ ಕುಂದಾಪುರದ ಸಾರ್ವಜನಿಕ ಆರೋಗ್ಯ ಘಟಕಕ್ಕೆ ಅಗತ್ಯವಿರುವ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಡಿಸೆಂಬರ್ 11 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಸ್ನಾತಕೋತ್ತರ ಪದವಿಯೊಂದಿಗೆ ವೈದ್ಯಕೀಯ ಪದವೀಧರರು/ ಪ್ರಿವೆಂಟಿವ್ ಮತ್ತು ಸೋಶಿಯಲ್ ಮೆಡಿಸಿನ್ನಲ್ಲಿ ಡಿಪ್ಲೊಮಾ/ ಸಾರ್ವಜನಿಕ ಆರೋಗ್ಯ ಅಥವಾ ಸಾಂಕ್ರಾಮಿಕ ರೋಗ ಶಾಸ್ತ್ರ ಅಥವಾ ಯಾವುದೇ ವೈದ್ಯಕೀಯ ಪದವಿಯೊಂದಿಗೆ ಎರಡು ವರ್ಷದ ಅನುಭವ ಇನ್ ಅಥವಾ ಜೀವ ವಿಜ್ಞಾನದಲ್ಲಿ ಎಂ.ಎಸ್ಸಿ ಪದವಿಯೊಂದಿಗೆ ಎರಡು ವರ್ಷದ ಅನುಭವ ಎಂ.ಪಿ.ಹೆಚ್ (ಸಾರ್ವಜನಿಕ ಆರೋಗ್ಯದಲ್ಲಿ ಮಾಸ್ಟರ್ಸ್), ಎಂ.ಎಸ್ಸಿ (ಸಾಂಕ್ರಮಿಕ ರೋಗ ಶಾಸ್ತ್ರ) ಸಾರ್ವಜನಿಕ ಆರೋಗ್ಯದಲ್ಲಿ ಎರಡು ವರ್ಷದ ಅನುಭವ ಹೊಂದಿರುವ ವಿದ್ಯಾರ್ಹತೆ ಉಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.