ಉಡುಪಿ: ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
3ಡಿ / ಫೋಟೋಶಾಪ್, ಸಿ.ಎಸ್.ಆರ್ ಮತ್ತು ಅಕೌಂಟಿAಗ್ ಹುದ್ದೆಗಳಿಗೆ, ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.















